




ಅಜ್ಜಾವರ: ವಿವೇಕ ಹಿರಿಯ ಪ್ರಾಥಮಿಕ ಶಾಲೆ ಅಜ್ಜಾವರ ಇಲ್ಲಿ ಪೋಷಕರ ಸಭೆ ಹಾಗೂ ಸನ್ಮಾನ ಕಾರ್ಯಕ್ರಮದೊಂದಿಗೆ ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ಪೋಷಕರಿಗೆ ಮಾಹಿತಿ ಕಾರ್ಯಾಗಾರವು ಆಗಸ್ಟ್ 8ರಂದು ಶಾಲಾ ಆವರಣದಲ್ಲಿ ನಡೆಯಿತು.
ಕಾರ್ಯಕ್ರಮವನ್ನು ಜೇಸಿಐ ಸುಳ್ಯ ಪಯಸ್ವಿನಿಯ ಪೂರ್ವಾಧ್ಯಕ್ಷರೂ, ನ್ಯಾಯವಾದಿಗಳಾದ ಜೇಸಿ ಹೆಚ್. ಜಿ.ಜಿಎಫ್ ರಂಜಿತ್ ಕುಕ್ಕೆಟ್ಟಿ ಉದ್ಘಾಟಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೊಡಗು ಜಿಲ್ಲಾ ಉಪನಿರ್ದೇಶಕರ ಕಚೇರಿಯ ಪ್ರಥಮ ದರ್ಜೆ ಸಹಾಯಕರಾದ ಶಿವಪ್ರಸಾದ್ ಕೆ.ವಿ. ಅವರನ್ನು ಸಂಸ್ಥೆಯ ವತಿಯಿಂದ ಸನ್ಮಾನಿಸಲಾಯಿತು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಜೇಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೊಂಟಡ್ಕ ಅವರು “ಮಕ್ಕಳ ಬೆಳವಣಿಗೆಯಲ್ಲಿ ಪೋಷಕರ ಪಾತ್ರ” ಎಂಬ ವಿಷಯದ ಕುರಿತು ಪೋಷಕರಿಗೆ ಉಪನ್ಯಾಸ ಕಾರ್ಯಗಾರ ನಡೆಸಿಕೊಟ್ಟರು.
ಶಾಲೆಯ ಸಂಚಾಲಕರಾದ ಹಸೈನರ್ ಹಾಜಿ ಗೋರಡ್ಕ ಕಾರ್ಯಕ್ರಮದ ಸಭಾಧ್ಯಕ್ಷತೆ ವಹಿಸಿ ಶಾಲೆಯ ಬಗ್ಗೆ ಮಾಹಿತಿಯನ್ನು ನೀಡಿದರು. ಪೋಷಕರ ಪರವಾಗಿ ಶಾಫಿ ಧಾರಿಮಿ ಮಾತನಾಡಿದರು.
ಕಾರ್ಯಕ್ರಮದಲ್ಲಿ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಹಮೀದ್ ಬಯಂಬು, ಲೈನ್ಸ್ ಎಜುಕೇಶನ್ ಟ್ರಸ್ಟ್‌ನ ಸದಸ್ಯರಾದ ಅಂಜನಿ ಗೋರಡ್ಕ, ಮುಖ್ಯೋಪಾಧ್ಯಾಯಿನಿ ವೆರೋನಿಕಾ ಮಾಡ್ತಾ, ಸಹಶಿಕ್ಷಕರು ಹಾಗೂ ಪೋಷಕರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಬಳಿಕ ಶಿಕ್ಷಕ-ರಕ್ಷಕ ಸಂಘ ಹಾಗೂ ಸುರಕ್ಷಾ ಸಮಿತಿಯ ನೂತನ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನು ಆಯ್ಕೆ ಮಾಡಲಾಯಿತು. ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷರಾಗಿ ಹಮೀದ್ ಬಯಂಬು ಹಾಗೂ ಸುರಕ್ಷಾ ಸಮಿತಿಯ ಅಧ್ಯಕ್ಷರಾಗಿ ಅಬ್ದುಲ್ ಕೊಳಂಬೆ ಆಯ್ಕೆಯಾದರು.
ಸಹಶಿಕ್ಷಕಿ ಶ್ರೀಮತಿ ಮಂಜುಶ್ರೀ ಸ್ವಾಗತಿಸಿದರು. ಸಹಶಿಕ್ಷಕಿ ಶ್ರೀಮತಿ ಜಯಂತಿ ವಂದಿಸಿದರು. ಸಹಶಿಕ್ಷಕಿ ಶ್ರೀಮತಿ ಸವಿತಾ ಕಾರ್ಯಕ್ರಮ ನಿರೂಪಿಸಿದರು.




