ಜೇ.ಸಿ.ಐ ಸುಳ್ಯ ಪಯಸ್ವಿನಿ ವತಿಯಿಂದ ಸುಳ್ಯದ ಕುರುಂಜಿಭಾಗ್ ನ ಬಳಿ ಇರುವ ಮೆಟ್ರಿಕ್ ನಂತರದ ವಿದ್ಯಾರ್ಥಿನಿ ನಿಲಯದಲ್ಲಿ 80ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಜೇಸಿಐ ಸುಳ್ಯ ಪಯಸ್ವಿಯ ಅಧ್ಯಕ್ಷರಾದ ಜೆ.ಎಫ್.ಎಂ. ಲತಾಶ್ರೀ ಸುಪ್ರೀತ್ ಮೋಂಟಡ್ಕರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು
ನಿಲಯದ ಮೇಲ್ವಿಚಾರಕಿ ಗೀತಾ ರವರು ಧ್ವಜಾರೋಹಣ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಭಾಗವಹಿಸಿದ ಜೇಸಿಐ ಸುಳ್ಯ ಪಯಸ್ವಿಯ ಪೂರ್ವಾಧ್ಯಕ್ಷರಾದ ಜೇ. ಎಪ್. ಎಂ. ಗುರುಪ್ರಸಾದ್ ನಾಯಕ್ ಭಾಗವಹಿಸಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಾಮಾಜಿಕ ಮುಖಂಡರಾದ ಸುಪ್ರೀತ್ ಮೋಂಟಡ್ಕ, ವಿದ್ಯಾರ್ಥಿನಿ ನಿಲಯದ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದು ಸಂಭ್ರಮದಿಂದ ಆಚರಿಸಿದರು.