ಪಳ್ಳತ್ತೂರು ಹಿಮಾದುತ್ತೀನ್ ಮದ್ರಸಾ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಹಾಜಿ ಅಬ್ದುಲ್ಲಾ ಮುಸ್ಲಿಯಾರ್ ಸ್ಮರಣಾ ಸಂಗಮವನ್ನು ಪಳ್ಳತ್ತೂರಿನಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಆಯೋಜಿಸಲಾಯಿತು.
ಸಯ್ಯಿದ್ ಝೈನುಲ್ ಆಬಿದೀನ್ ಮುತ್ತುಕೋಯ ತಂಙಳ್ ಝಿಯಾರತ್‌ಗೆ ನೇತೃತ್ವ ನೀಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಯ್ಯಿದ್ ಝೈನುಲ್ ಆಬಿದೀನ್ ತಂಙಳ್ ಕುನ್ನುಂಗೈ ನೇತೃತ್ವ ವಹಿಸಿದ್ದರು. ಸಯ್ಯಿದ್ ಜಲಾಲುದ್ದೀನ್ ತಂಙಳ್ ಸಮಾರೋಪ ಪ್ರಾರ್ಥನೆ ನೆರವೇರಿಸಿದರು.