ಸುಳ್ಯ/ಮಂಗಳೂರು: ರಿಕ್ಷಾ ಚಾಲಕರುಗಳ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಭಾರತೀಯ ಮಜ್ದೂರ್ ಸಂಘ (ಬಿಎಂಎಸ್) ಸಂಯೋಜಿತ ಸುಳ್ಯ ತಾಲೂಕು ಆಟೋ ರಿಕ್ಷಾ ಚಾಲಕರ ಸಂಘ (ರಿ.) ವತಿಯಿಂದ ನೂರಾರು ಆಟೋ ಚಾಲಕರು ಜಿಲ್ಲಾ ಕೇಂದ್ರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರುಸುಳ್ಯ ತಾಲೂಕಿನ ವಿವಿಧ ಭಾಗಗಳಾದ ಸುಳ್ಯ ನಗರ, ಕಲ್ಲುಗುಂಡಿ, ಪಂಜ, ಎಡಮಂಗಲ, ಗುತ್ತಿಗಾರು, ಸುಬ್ರಹ್ಮಣ್ಯ, ಹರಿಹರ, ಕಲ್ಕಾರು, ಜಾಲ್ಲೂರು, ಕುಕ್ಕುಜಡ್ಕ ಹಾಗೂ ಪೇರಾಜೆ ಘಟಕಗಳಿಂದ ನೂರಾರು ಸಂಖ್ಯೆಯಲ್ಲಿ ಆಗಮಿಸಿದ ಆಟೋ ಚಾಲಕರು ಪ್ರತಿಭಟನೆಯಲ್ಲಿ ಪಾಲ್ಗೊಂಡು ಸರ್ಕಾರದ ವಿರುದ್ಧ ತಮ್ಮ ಹಕ್ಕೊತ್ತಾಯಗಳನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮುಖಂಡರು, ಆಟೋ ಚಾಲಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಸರ್ಕಾರ ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ತಾಲೂಕು ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಪ್ರಕಾಶ್ ಎಂ.ಎಸ್., ಪ್ರಧಾನ ಕಾರ್ಯದರ್ಶಿ ನಾರಾಯಣ ಎಸ್.ಎಂ. ಪೈಚಾರ್, ಕೋಶಾಧಿಕಾರಿ ರವಿ ಎಸ್., ಸಂಘಟನಾ ಕಾರ್ಯದರ್ಶಿ ಸುಂದರ್ ಪೇರಾಜೆ, ಮಾಜಿ ಅಧ್ಯಕ್ಷರಾದ ರಾಧಾಕೃಷ್ಣ ಬೈತಡ್ಕ, ಮಾಜಿ ಕಾರ್ಯದರ್ಶಿ ಚಂದ್ರಶೇಖರ್ ಮರ್ಕಂಜ ಸೇರಿದಂತೆ ತಾಲೂಕಿನ ಎಲ್ಲಾ ಘಟಕಗಳ ಪದಾಧಿಕಾರಿಗಳು ಹಾಗೂ ಸದಸ್ಯರು ದೊಡ್ಡ ಸಂಖ್ಯೆಯಲ್ಲಿ ಭಾಗವಹಿಸಿದ್ದರು.