ಅರಂತೋಡು ಮದರಸದಲ್ಲಿ ಶಿಕ್ಷಕ – ರಕ್ಷಕರ ಸಭೆ


ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ಆಶ್ರಯದಲ್ಲಿ ಶಿಕ್ಷಕ – ರಕ್ಷಕರ ಸಭೆಯು ಆ.14 ರಂದು ನುಸ್ರತುಲ್ ಇಸ್ಲಾಂ ಮದರಸ ಸಭಾಂಗಣದಲ್ಲಿ ನಡೆಯಿತು.
ಅಧ್ಯಕ್ಷತೆಯನ್ನು ಜಮಾಅತ್ ಅಧ್ಯಕ್ಷ ಅಶ್ರಫ್ ಗುಂಡಿ ವಹಿಸಿದರು. ಮದರಸ ಮ್ಯಾನೇಜ್ ಮೆಂಟ್ ಅಧ್ಯಕ್ಷ ಅಮೀರ್ ಕುಕ್ಕುಂಬಳ ಸ್ವಾಗತಿಸಿದರು. ಸದರ್ ರವೂಫ್ ಅಝ್ ಹರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಖತೀಬರಾದ ಬಹು| ಆಸಿಫ್ ಅಝ್ ಹರಿ ವಿಷಯ ಮಂಡಿಸಿ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತನ್ನು ಮೈಗೂಡಿಸಬೇಕೆಂದರು. ಮುಖ್ಯ ಅತಿಥಿಗಳಾಗಿ ನಿವೃತ್ತ ಉಪನ್ಯಾಸಕ ಎ.ಅಬ್ದುಲ್ಲ ಭಾಗವಹಿಸಿದರು. ಜಮಾಅತ್ ಕಾರ್ಯದರ್ಶಿ ಕೆ.ಎಂ ಮೂಸಾನ್ ಎಸೋಸಿಯೇಶನ್ ಕೋಶಾಧಿಕಾರಿ ಸಂಶುದ್ಧೀನ್ ಪೆಲ್ತಡ್ಕ, ಸಹಾಯಕ ಅಧ್ಯಾಪಕ ಅಬ್ದುಲ್ ರಹಿಮಾನ್ ಝುಹ್ ರಿ, ಎ. ಹನೀಫ್, ಮುಜೀಬ್. ಕೆ.ಎಂ. ಅನ್ವಾರ್ ಹಾಗೂ ಪೋಷಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದರು.

Leave a Reply

Discover more from

Subscribe now to keep reading and get access to the full archive.

Continue reading