

ಸುಳ್ಯ: ಮುಂಗಾರು ವಾಲಿಬಾಲ್ ಅಕಾಡೆಮಿ (ರಿ.) ಸುಳ್ಯ ಇದರ ಆಶ್ರಯದಲ್ಲಿ, ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ, ಸುಳ್ಯ ತಾಲೂಕು ವಾಲಿಬಾಲ್ ಅಸೋಸಿಯೇಷನ್ ಹಾಗೂ ಮಲೆನಾಡು ಚಾರಿಟೇಬಲ್ ಟ್ರಸ್ಟ್ ಸುಳ್ಯ ಇವರ ಸಹಯೋಗದೊಂದಿಗೆ ಸುಳ್ಯ ತಾಲೂಕು ಮಟ್ಟದ ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಪದವಿಪೂರ್ವ ಬಾಲಕ ಮತ್ತು ಬಾಲಕಿಯರ ವಾಲಿಬಾಲ್ ಪಂದ್ಯಾವಳಿಯು ಜರುಗಲಿದೆ.
ಆಗಸ್ಟ್ 23, 2026 ರಂದು ಬೆಳಿಗ್ಗೆ 08:30 ಗಂಟೆಗೆ ಗ್ರೀನ್ ವ್ಯೂ ಶಿಕ್ಷಣ ಸಂಸ್ಥೆ ವರಾಂಡ, ಜಟ್ಟಿಪಳ್ಳ ರಸ್ತೆ, ನಾವೂರು, ಸುಳ್ಯ ಇಲ್ಲಿ ಈ ಪಂದ್ಯಾವಳಿಯು ನಡೆಯಲಿದೆ. ಗ್ರಾಮೀಣ ಭಾಗದ ವಿದ್ಯಾರ್ಥಿಗಳಲ್ಲಿ ಕ್ರೀಡಾಸಕ್ತಿ ಹೆಚ್ಚಿಸುವ ಸದುದ್ದೇಶದಿಂದ ಇದನ್ನು ಆಯೋಜಿಸಲಾಗಿದ್ದು, ತಾಲೂಕಿನ ವಿವಿಧ ಶಾಲೆ ಹಾಗೂ ಕಾಲೇಜುಗಳ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ. ಕ್ರೀಡಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವಂತೆ ಸಂಘಟಕರು ವಿನಂತಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ:
-
ರಜ್ಜು ಬಯ್ಯ: 9448365007
-
ರಿಯಾಜ್ ಕಟ್ಟೆಕ್ಕಾರ್: 9945542103
-
ಸುದರ್ಶನ್ ಸುಳ್ಯ: 9987059169
-
ಸಿರಾಜುದ್ದೀನ್ : 9844489868
-
ಇರ್ಫಾನ್ ಜನತಾ: 9901725456


