ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ಸಹಕಾರ ಸಂಘಕ್ಕೆ ವಿಶಿಷ್ಠ ಸಾಧನೆಗೆ ಪ್ರಶಸ್ತಿ

ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ.ನಿ. ಸುಳ್ಯ ತನ್ನ ಕಾರ್ಯ ವ್ಯಾಪ್ತಿಯಲ್ಲಿ ಸಾಧಿಸಿರುವ ವಿಶಿಷ್ಠ ಸಾಧನೆಯನ್ನು ಪರಿಗಣಿಸಿ 2025-26ನೇ ಸಾಲಿನ ದ .ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಮಹಾಸಭೆ ಯಲ್ಲಿ ಅಲ್ಪಸಂಖ್ಯಾತರ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷರಾದ ಐ. ಕೆ. ಮಹಮ್ಮದ್ ಇಕ್ಬಾಲ್ ಎಲಿಮಲೆ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಜ್ವಲ್ ನಾಯಕ್ ರವರನ್ನು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಡಾ : ಎಂ ಎನ್.ರಾಜೇಂದ್ರ ಕುಮಾರ್ ರವರು ಪ್ರಶಸ್ತಿ ನೀಡಿ ಅಭಿನಂದಿಸಿದರು

ಈ ಸಂದರ್ಭದಲ್ಲಿ ಜಿಲ್ಲಾ ಸಹಕಾರಿ ಬ್ಯಾಂಕ್ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ಬಾಲ್ಯೊಟ್ಟು ನಿರ್ದೇಶಕರಾದ ಎಸ್. ಬಿ.ಜಯರಾಮ್ ರೈ, ದೇವಿಪ್ರಸಾದ್ ಶೆಟ್ಟಿ ಎಸ್.ಎನ್. ಮನ್ಮಥ. ಸಹಕಾರ ಸಂಘಗಳ ಉಪ ನಿಬಂಧಕರಾದ ಎಚ್. ಯನ್. ರಮೇಶ್, ಅಲ್ಪಸಂಖ್ಯಾತ ಸಹಕಾರ ಸಂಘ ದ ಸದಸ್ಯರಾದ ಫೈಝುಲ್ ಜೀರ್ಮುಕ್ಕಿ ಮೊದಲಾದವರು ಉಪಸ್ಥಿತರಿದ್ದರು.

Leave a Reply

Discover more from

Subscribe now to keep reading and get access to the full archive.

Continue reading