


ಸುಳ್ಯ: ತಾಲೂಕಿನ ನೆಲ್ಲೂರು ಕೆಮ್ರಾಜೆ ಗ್ರಾಮದ ಹರ್ಲಡ್ಕ ನಿವಾಸಿ ಲಿಖಿತ (26) ಅವರು ಅನಾರೋಗ್ಯದ ಕಾರಣದಿಂದ ನಿಧನರಾಗಿದ್ದಾರೆ.
ಕಳೆದ ಕೆಲ ಕಾಲದಿಂದ ಬಿಳಿರಕ್ತಕಣಗಳ (White Blood Cells) ಸಮಸ್ಯೆಯಿಂದ ಬಳಲುತ್ತಿದ್ದ ಅವರು ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಮೃತರು ಪಟ್ಟೆ ಧನಂಜಯ ಮತ್ತು ದಮಯಂತಿ ದಂಪತಿಗಳ ಪುತ್ರಿಯಾಗಿದ್ದಾರೆ. ಯುವತಿಯ ಅಕಾಲಿಕ ನಿಧನಕ್ಕೆ ಹರ್ಲಡ್ಕ ಹಾಗೂ ನೆಲ್ಲೂರು ಕೆಮ್ರಾಜೆ ಗ್ರಾಮಸ್ಥರು ತೀವ್ರ ಸಂತಾಪ ಸೂಚಿಸಿದ್ದಾರೆ.



