ಸುಳ್ಯ ತಾಲೂಕಿನ ಕಾಂತಮಂಗಲದಲ್ಲಿರುವ ಡಾಕ್ಟರ್ ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಕ್ಕೆ ಗ್ಯಾರಂಟಿ ಅನುಷ್ಠಾನ ಸಮಿತಿಯ ಸುಳ್ಯ ತಾಲೂಕು ಅಧ್ಯಕ್ಷರಾದ ಶಾಹುಲ್ ಹಮೀದ್ ಕುತ್ತಮೊಟ್ಟೆ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ವಿದ್ಯಾರ್ಥಿನಿಲಯದಲ್ಲಿ ಲಭ್ಯವಿರುವ ಸೌಲಭ್ಯಗಳು, ವಿದ್ಯಾರ್ಥಿಗಳಿಗೆ ಸಿಗುತ್ತಿರುವ ವಸತಿ ಹಾಗೂ ಊಟೋಪಹಾರದ ವ್ಯವಸ್ಥೆಗಳ ಕುರಿತು ಅವರು ಪರಿಶೀಲನೆ ನಡೆಸಿದರು. ಅಲ್ಲದೆ, ಹಾಸ್ಟೆಲ್‌ನಲ್ಲಿ ಯಾವುದೇ ಕೊರತೆಗಳಿದ್ದರೆ ಅವುಗಳನ್ನು ಶೀಘ್ರವಾಗಿ ಬಗೆಹರಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚೆ ನಡೆಸುವುದಾಗಿ ತಿಳಿಸಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ಅವರ ಸಮಸ್ಯೆಗಳು ಹಾಗೂ ಬೇಡಿಕೆಗಳನ್ನು ಆಲಿಸಿದರು.






