ಕವಿಜಿ ಸುಳ್ಯ ಹಬ್ಬ ಸಮಿತಿ ವತಿಯಿಂದ ಮೂಸಾ ಕುಂಞಿ ಪೈಂಬಚ್ಚಾಲ್ ರಿಗೆ ಸನ್ಮಾನ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಇದರ ಪ್ರಸ್ತುತ ಸಾಲಿನ ಪ್ರಥಮ ಕಾರ್ಯಕಾರಿ ಸಮಿತಿ ಸಭೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘ (ರಿ.) ಇದರ ಪ್ರಸ್ತುತ ಸಾಲಿನ ಪ್ರಥಮ ಕಾರ್ಯಕಾರಿ ಸಮಿತಿ ಸಭೆಯು ಸಂಘದ ಕಚೇರಿಯಲ್ಲಿ ನಡೆಯಿತು.

ಸಂಘದ ಸದಸ್ಯತ್ವವನ್ನು ಪಡೆದ ಅಡ್ವಕೇಟ್ ಮೂಸಾ ಕುಂಞಿ ಪೈಂಬಚ್ಚಾಲ್ ಅವರನ್ನು ಈ ಸಂದರ್ಭದಲ್ಲಿ ಸಂಘದ ವತಿಯಿಂದ ಗೌರವಿಸಲಾಯಿತು.

ಸಂಘದ ಅಧ್ಯಕ್ಷರಾದ ಎಸ್. ಶಂಶುದ್ದೀನ್ ಅವರು ಸಭೆಯ ಅಧ್ಯಕ್ಷತೆ ವಹಿಸಿ, ಸಭೆಗೆ ಆಗಮಿಸಿದ ಎಲ್ಲರನ್ನೂ ಆತ್ಮೀಯವಾಗಿ ಸ್ವಾಗತಿಸಿದರು. ಸಭೆಯಲ್ಲಿ ಸಂಘದ ಮುಂದಿನ ಕಾರ್ಯಚಟುವಟಿಕೆಗಳು ಹಾಗೂ ವಿವಿಧ ಸಮಾಜ ಸೇವಾ ಕಾರ್ಯಕ್ರಮಗಳ ಕುರಿತು ಚರ್ಚಿಸಲಾಯಿತು.

ನಿಮ್ಮದೊಂದು ಉತ್ತರ