ಕಲ್ಲುಗುಂಡಿ ನಿಶಾನಾ ಸಾವು: ಆರೋಪಿಗಳಿಗೆ ಜಾಮೀನು

ಸಾಕಾರ ನ್ಯೂಸ್: ಸಂಪಾಜೆಯ ಕಡಪಾಲ ಬಳಿ ನಿಗೂಢವಾಗಿ ಕೊಲೆಗೀಡಾಗಿದ್ದ ಫಾತಿಮತ್ ನಿಶಾನಾ    ಸಾವಿನ ಆರೋಪಿಗಳಿಗೆ ಪುತ್ತೂರು ಐದನೇ ಹೆಚ್ಚುವರಿ ನ್ಯಾಯಾಲಯ ಶರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಜು.18, 2026ರಂದು ರಾತ್ರಿ ಮಾವ ಅಲವಿ, ಅತ್ತೆ ಆಯಿಷಾ ಹಾಗೂ ನಾದಿನಿ ಫಸೀಲಾ ಹಿಂಸೆ ನೀಡಿ ಕೊಂದಿರುವ ಆರೋಪದ ಹಿನ್ನೆಲೆಯಲ್ಲಿ ಸುಳ್ಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದರು.

ಬಳಿಕ ಸುಳ್ಯ ಹಿರಿಯ ನ್ಯಾಯಾಧೀಶರು ಮತ್ತು ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿತ್ತು. ಆಯಿಷಾ ಮತ್ತು ಫಸೀಲಾ ಪರವಾಗಿ ಪುತ್ತೂರು  ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ.

ಆರೋಪಿಗಳ ಪರವಾಗಿ ಸುಳ್ಯದ ಹಿರಿಯ ನ್ಯಾಯವಾದಿ ಎಂ.ವೆಂಕಪ್ಪ ಗೌಡ, ಚಂಪಾ ವಿ.ಗೌಡ, ರಾಜೇಶ್ ಬಿ.ಜಿ, ಶ್ಯಾಮ್ ಪ್ರಸಾದ್ ಎಸ್.ಕೆ ಹಾಗೂ ವಿಮಲೇಶ್ ಆರ್.ಗೌಡ ವಾದಿಸಿದ್ದರು.

Leave a Reply

Discover more from

Subscribe now to keep reading and get access to the full archive.

Continue reading