ಕಲ್ಲುಗುಂಡಿ: ಇಲ್ಲಿನ ನೆಲ್ಲಿಕುಮೇರಿಯ ಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನದಲ್ಲಿ ಈ ಬಾರಿಯ ಶಾರದೋತ್ಸವ ಹಾಗೂ ನವರಾತ್ರಿ ಉತ್ಸವವು ಅಕ್ಟೋಬರ್ 11 ರಿಂದ ಅಕ್ಟೋಬರ್ 20ರ ಮಂಗಳವಾರದವರೆಗೆ ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ದೇವಸ್ಥಾನದ ಆಡಳಿತ ಮಂಡಳಿ ತಿಳಿಸಿದೆ.
ಉತ್ಸವದ ಅಂಗವಾಗಿ ಅಕ್ಟೋಬರ್ 10ರಂದು ದೇವಸ್ಥಾನದಲ್ಲಿ ಆಯುಧ ಪೂಜೆ ನೆರವೇರಲಿದೆ. ಬಳಿಕ ಅಕ್ಟೋಬರ್ 11 ರಿಂದ 20ರ ವರೆಗೆ ದಿನಂಪ್ರತಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 16ರಂದು ಖ್ಯಾತ ವಿದ್ವಾಂಸರಾದ ಲಕ್ಷ್ಮೀಶ ಗಬ್ಲಡ್ಕ ಅವರಿಂದ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗಿದೆ. ವಿಜಯದಶಮಿಯ ಮುನ್ನಾದಿನವಾದ ಅಕ್ಟೋಬರ್ 18ರಂದು ಪುಟ್ಟ ಮಕ್ಕಳಿಗೆ ವಿದ್ಯಾಾರಂಭದ ಸಂಕೇತವಾಗಿ ‘ಅಕ್ಷರಾಭ್ಯಾಸ’ ಕಾರ್ಯಕ್ರಮ ಜರುಗಲಿದೆ.
ಉತ್ಸವದ ಕೊನೆಯ ದಿನವಾದ ಅಕ್ಟೋಬರ್ 20ರ ಮಂಗಳವಾರದಂದು ಸಂಜೆ ಕಲ್ಲುಗುಂಡಿ ಮುಖ್ಯ ಪೇಟೆಯಲ್ಲಿ ಶ್ರೀ ಶಾರದಾ ದೇವಿಯ ಭವ್ಯ ಶೋಭಾಯಾತ್ರೆ ಜರುಗಲಿದ್ದು, ಭಕ್ತಾದಿಗಳ ಆಕರ್ಷಣೆಯ ಕೇಂದ್ರವಾಗಲಿದೆ.
ಈ ಎಲ್ಲಾ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಊರ-ಪರವೂರ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ತಾಯಿಯ ಕೃಪೆಗೆ ಪಾತ್ರರಾಗಬೇಕಾಗಿ ಹಾಗೂ ಉತ್ಸವವನ್ನು ಯಶಸ್ವಿಗೊಳಿಸಬೇಕಾಗಿ ದೇವಸ್ಥಾನದ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ವಿನಂತಿಸಿದೆ.

