ದುಗ್ಗಲಡ್ಕ: ಕಾರನ್ನು ರಿವರ್ಸ್ ತೆಗೆಯುವ ಸಂದರ್ಭದಲ್ಲಿ ಸಂಭವಿಸಿದ ದುರಂತದಲ್ಲಿ ಕಾರಿನ ಅಡಿಗೆ ಬಿದ್ದು ಗೃಹಿಣಿಯೊಬ್ಬರು ಮೃತಪಟ್ಟಿರುವ ಘಟನೆ ಇದೀಗ ವರದಿಯಾಗಿದೆ.
ಕಾರನ್ನು ರಿವರ್ಸ್ ತೆಗೆಯುತ್ತಿದ್ದ ವೇಳೆ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ ಆಕಸ್ಮಿಕವಾಗಿ ಕಾರಿನ ಅಡಿಗೆ ಬಿದ್ದ ಗೃಹಿಣಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ದುರಂತದಿಂದ ದುಗ್ಗಲಡ್ಕ ಪರಿಸರದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.
ಮೃತರ ಹೆಸರು ಕಮರುನ್ನಿಸಾ ಎಂದಾಗಿದ್ದು ಘಟನೆಯ ನಿಖರ ಸಮಯ ಹಾಗೂ ಇತರ ಹೆಚ್ಚಿನ ವಿವರಗಳು ಲಭ್ಯವಾಗಬೇಕಿದೆ.

